ಲೋಕಸಭಾ ಚುನಾವಣೆಗೆ ಪ್ರಿಯಾಂಕ ಸ್ಪರ್ಧೆ : ಯಾವ ಕ್ಷೇತ್ರದಿಂದ..?

By Web DeskFirst Published Aug 4, 2018, 12:26 PM IST
Highlights

ಸೋನಿಯಾ ಪುತ್ರಿ ಪ್ರಿಯಾಂಕ ಗಾಂಧಿ ಲೋಕಸಭಾ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದು, ಸೋನಿಯಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಹಲವು ವರ್ಷಗಳಿಂದ ಆಗಾಗ್ಗೆ ಕೇಳಿಬರುತ್ತಲೇ ಇದೆ. ಆದರೆ ಮೂಲಗಳ ಪ್ರಕಾರ 2019ರ ಲೋಕಸಭಾ ಚುನಾವಣೆ ವೇಳೆಗೆ ಇದು ನಿಜವಾಗುವ ಸಾಧ್ಯತೆ ದಟ್ಟವಾಗಿದೆ.

ಮೂಲಗಳ ಪ್ರಕಾರ ಮುಂದಿನ ಲೋಕಸಭಾ ಚುನಾವಣೆಯಲ್ಲಿ, ಪ್ರಿಯಾಂಕಾ, ತಮ್ಮ ತಾಯಿ ಕಳೆದ ಬಾರಿ ಸ್ಪರ್ಧಿಸಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. 1999 ರಲ್ಲಿ ಅಮೇಠಿಯಿಂದ ಸ್ಪರ್ಧಿಸಿ ಗೆದ್ದಿದ್ದ ಸೋನಿಯಾ ಗಾಂಧಿ ಆ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದರು. ಇದೀಗ ಕಾಂಗ್ರೆಸ್ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರವನ್ನು ಪ್ರಿಯಾಂಕಾಗೆ ಬಿಟ್ಟುಕೊಟ್ಟು, ಚುನಾವಣಾ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 

click me!