
ಬೆಂಗಳೂರು(ಜುಲೈ 31): ಅಖಿಲ ಭಾರತ ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಅಥವಾ ವಿಶ್ವ ಲಿಂಗಾಯತ ಪರಿಷತ್ ಸ್ಥಾಪಿಸಲು ಭರದ ಸಿದ್ಧತೆ ನಡೆದಿದೆ. ರಾಜ್ಯ ಸರ್ಕಾರದ ಕೆಲವು ಪ್ರಮುಖ ಸಚಿವರೂ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಈ ಕುರಿತಂತೆ ಚರ್ಚೆ ನಡೆದಿದ್ದು, ಶೀಘ್ರವೇ ಒಂದು ನಿರ್ಣಯಕ್ಕೆ ಬರಲಾಗುವುದು ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ ತಿಳಿಸಿದ್ದಾರೆ. ಲಿಂಗಾಯತ ಪದವನ್ನು ಒಪ್ಪುವ ಎಲ್ಲ ಮಠಾಧೀಶರನ್ನು ಒಂದೆಡೆ ಸೇರಿಸಲಾಗುವುದು. ಸಮಾಜದ ಚಿಂತನಶೀಲರು ಮತ್ತು ಸದಸ್ಯರನ್ನು ಸಂಘಟಿಸುವ ಮೂಲಕ ಇದನ್ನೊಂದು ರಾಜಕೀಯ ರಹಿತ ವೇದಿಕೆಯಾಗಿ ಅಸ್ತಿತ್ವಕ್ಕೆ ತರಲಾಗುವುದು. ಭವಿಷ್ಯದಲ್ಲಿ ಈ ಕುರಿತ ರೂಪುರೇಷೆಗಳನ್ನು ಸಿದ್ಧಪಡಿಸಲು ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಗುವುದು’ ಎಂದು ಪಾಟೀಲ ವಿವರಿಸಿದರು. ಮಠಾಧೀಶರ ವಲಯದಲ್ಲಿ ಗದಗಿನ ತೋಂಟದಾರ್ಯ, ಭಾಲ್ಕಿ, ಕೂಡಲ ಸಂಗಮದ ಪಂಚಮಸಾಲಿ ಪೀಠ, ಬೆಳಗಾವಿಯ ರುದ್ರಾಕ್ಷಿ ಮಠದ ಸ್ವಾಮೀಜಿಗಳು ಹಾಗೂ ಮೈಸೂರಿನ ಬಸವ ಜ್ಞಾನ ಮಂದಿರದ ಪೀಠಾಧ್ಯಕ್ಷೆ ಇದ್ದಾರೆ’ ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.