
ಲಖನೌ[ಡಿ.10]: ಅಲಹಾಬಾದ್ ಜಿಲ್ಲೆಯ ಹೆಸರನ್ನು ಪ್ರಯಾಗರಾಜ್ ಎಂದೂ, ಫೈಜಾಬಾದ್ ಜಿಲ್ಲೆಯ ಹೆಸರನ್ನು ಅಯೋಧ್ಯೆ ಎಂದು ರಾಜ್ಯ ಸರ್ಕಾರ ಬದಲಿಸಿದ ಬೆನ್ನಲ್ಲೇ ಅಲಹಾಬಾದ್ ವಿವಿ ಹೆಸರನ್ನು ಪ್ರಯಾಗ್‌ರಾಜ್ ವಿವಿ ಎಂದು ಬದಲಿಸಲು ವಿವಿಯ ಉಪಕುಲಪತಿ ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದಾರೆ.
ವಿವಿಯ ಹೆಸರನ್ನೂ ಪ್ರಯಾಗ್‌ರಾಜ್ ಎಂದು ಬದಲಿಸಲು ಬೇಡಿಕೆ ಎಂದು ಇತ್ತಿಚೇಗಷ್ಟೇ ರಾಜ್ಯದ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಹೇಳಿದ್ದರು. ಅದರ ಬೆನಲ್ಲೇ, ವಿವಿಯಿಂದ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ವಿವಿಯ ಈ ಕ್ರಮಕ್ಕೆ ವಿಪಕ್ಷಗಳಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ