
ಲಕ್ನೋ(ಜೂ.6): ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಭಾರೀ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಸಾರ್ವಜನಿಕ ಸಭೆಯಲ್ಲಿ ಈ ರೀತಿ ಬಹಿರಂಗ ಹೇಳಿಕೆ ನೀಡುವ ಮೂಲಕ ಸಭ್ಯತೆಯ ಎಲ್ಲೆ ಮೀರಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸುರೇಂದ್ರ ಸಿಂಗ್, ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ಕೆಲಸವಾಧ ಮೇಲೆ ನಮ್ಮಿಂದ ಹಣ ಪಡೆಯುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರವೂ ಕೆಲಸ ಮಾಡುವುದಿಲ್ಲ ಎಂದು ಕುಹುಕವಾಡಿದ್ದಾರೆ.
ಇನ್ನು ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ಕಳೆದ ಫೆಬ್ರುವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಂಗ್, ‘ಭಾರತ್ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.