
ಕೋಲಾರ(ಅ.13): ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕಸವನ್ನು ಮೂಟೆಗಳಲ್ಲಿ ತುಂಬಿಕೊಂಡು ಜಿಲ್ಲಾ ಪಂಚಾಯಿತಿ ವರೆಗೆ ಕಾಲ್ನಡಿಗೆ ಜಾಥಾದೊಂದಿಗೆ ಬಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.
ಈ ಕಸದಿಂದ ಸಾರ್ವಜನಿಕರು, ರೈತರು ಹೂ ಮಾರುಕಟ್ಟೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಸ ಹೆಚ್ಚಾಗುತ್ತಿದ್ದರೂ ನಗರಸಭೆ ಅಥವಾ ಜಿಲ್ಲಾಡಳಿತವಾಗಲಿ ತೆರವಿಗೆ ಪ್ರಯತ್ನಿಸುತ್ತಿಲ್ಲ.
ಸಮಯಕ್ಕೆ ವಿಲೇವಾರಿ ಮಾಡುವಂತೆ ನಗರಸಭೆ ಹಾಗೂ ಸದಸ್ಯರಿಗೆ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಮಾರುಕಟ್ಟೆ ಸಮೀಪ ಸಂಗ್ರಹವಾಗಿರುವ ಕಸದ ರಾಶಿಯನ್ನು ಕೂಡಲೇ ವಿಲೇವಾರಿ ಮಾಡಿ ನಗರದ ನೈರ್ಮಲ್ಯ ಕಾಪಾಡುವ ಅನಿವಾರ್ಯತೆ ಹೆಚ್ಚಾಗಿದೆ. ಇಲ್ಲವಾದಲ್ಲಿ ನಗರದಲ್ಲಿ ರೋಗರುಜಿನಗಳು ಹೆಚ್ಚಾಗುತ್ತದೆ ಎಂದು ತಿಳಿಸಿದರು. ಈ ಬಗ್ಗೆ ಗಮನ ಹರಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಆರೋಗ್ಯ ಸಚಿವ ರಮೇಶ್ಕುಮಾರ್ ಅವರಿಗೆ ಮನವಿ ಮಾಡಿದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.