
ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು, ಬನ್ನೇರುಘಟ್ಟ ರಸ್ತೆಯ ಅರಕೆರೆ ಸಿಗ್ನಲ್ ನಿಂದ ಐಐಎಂಬಿ ಸಿಗ್ನಲ್‌ವರೆಗೆ ಪಾದಯಾತ್ರೆ ನಡೆಸಿದರು. 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಒಂದು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆಯಿತು. 12 ವರ್ಷಗಳ ಹಿಂದೆಯೇ ಗುದ್ದಲಿ ಪೂಜೆ ನೆರವೇರಿಸಿದರೂ, ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.