ವಿಧಾನಸೌಧದ ಎದುರು ಮಲ ಸುರಿದುಕೊಂಡು ಪ್ರತಿಭಟನೆ

By Suvarna Web DeskFirst Published Jul 4, 2017, 4:41 PM IST
Highlights

ಕೆಲ ಖಾಸಗಿ ಕಂಪನಿಗಳ ವ್ಯಕ್ತಿಗಳು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸ್ತಿದ್ದಾರೆ. ಈ ಬಗ್ಗೆ ದೂರು ಕೊಟ್ಟರೂ ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಸರ್ಕಾರದ ಗಮನ ಸೆಳೆಯಲು

ಶಕ್ತಿಸೌಧದ ಮುಂದೆ ಪ್ರತಿಭಟನೆ ನಡೆಸಿದ್ದೇವೆ ಎಂದು ಪ್ರತಿಭಟನಾನಿರತರು ತಿಳಿಸಿದ್ದಾರೆ.

ಬೆಂಗಳೂರು(ಜು.04): ವಿಧಾನಸೌಧದ ಎದುರು ಬಡವರ ಹಿತಕ್ಷಣಾ ಸಮಿತಿಯ ಸದಸ್ಯರು ಮಲಮೂತ್ರ ಸುರಿದುಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ಪೂರ್ವ ತಾಲೂಕಿನಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ವಿವಿಧ ಖಾಸಗಿ ವ್ಯಕ್ತಿಗಳು ಮತ್ತು ಕಂಪೆನಿಗಳು ಒತ್ತುವರಿ ಮಾಡಿಕೊಂಡಿವೆ. ಶೀಘ್ರ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ತೆರವು ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

ಕೆಲ ಖಾಸಗಿ ಕಂಪನಿಗಳ ವ್ಯಕ್ತಿಗಳು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸ್ತಿದ್ದಾರೆ. ಈ ಬಗ್ಗೆ ದೂರು ಕೊಟ್ಟರೂ ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ಶಕ್ತಿಸೌಧದ ಮುಂದೆ ಪ್ರತಿಭಟನೆ ನಡೆಸಿದ್ದೇವೆ ಎಂದು ಪ್ರತಿಭಟನಾನಿರತರು ತಿಳಿಸಿದ್ದಾರೆ. ತದನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

click me!