
ಬೆಂಗಳೂರು (ಫೆ.27): ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ, ಬಯಲುಸೀಮೆ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.
ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲೇಬೇಕು ಎಂದು ಆಗ್ರಹಿಸಿದ ರೈತರ ಜೊತೆ, ಕನ್ನಡಪರ ಸಂಘಟನೆ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಸೇರಿ ವಿಧಾನ ಸೌಧ ಮುತ್ತಿಗೆ ಚಳುವಳಿ ನಡೆಸಿದವು.
ರೇಸ್’ಕೋರ್ಸ್ ರಸ್ತೆಯಿಂದ ವಿಧಾನ ಸೌಧವರೆಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾರಗಾಜ್, ಸಾ.ರಾ.ಗೋವಿಂದ್, ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ರ್ಯಾಲಿ ನಡೆಸಿದರು.
ನಂತರ ವಿಧಾನ ಸೌಧಕ್ಕೆ ಮುತ್ತಿಗೆ ಹಾಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಇದೇ ವೇಳೆ ಮಾತನಾಡಿದ ವಾಟಾಳ್ ನಾಗರಾಜ್. ರಾಜ್ಯ ಸರ್ಕಾರ ಈವರೆಗೂ ಶಾಶ್ವತ ನೀರಾವರಿ ಬಗ್ಗೆ ಯಾವುದೆ ಕ್ರಮವನ್ನು ತೆಗೆದುಕೊಂಡಿಲ್ಲ, ಇದರ ವಿರುದ್ಧ ನ್ಯಾಯ ಸಿಗುವರೆಗೂ ಹೋರಾಟ ನಡೆಸುತ್ತೆವೆ ಜೊತೆಗೆ ಕರ್ನಾಟಕ ಬಂದ್ ಕೂಡಾ ಮಾಡುತ್ತೇವೆ ಎಂ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.