
ಬೆಂಗಳೂರು: ಕಾಲಾ ಚಿತ್ರಪ್ರದರ್ಶನಕ್ಕೆ ರಾಜ್ಯದಲ್ಲಿ ಅವಕಾಶ ಮಾಡಿಕೊಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್, ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ನೀಡಬೇಕೆಂದು ಸರ್ಕಾರಕ್ಕೆ ಸೂಚಿಸಿದೆ.
ಕಾವೇರಿ ಬಗ್ಗೆ ರಜನೀಕಾಂತ್ ಹೇಳಿಕೆಯನ್ನು ವಿರೋಧಿಸಿ ಅವರು ಅಭಿನಯಿಸಿರುವ ಕಾಲಾ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡುವುದಿಲ್ಲವೆಂದು ಕನ್ನಡ ಸಂಘಟನೆಗಳು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿಕೆ ನೀಡಿದ್ದರು. ಇದರಿಂದ ಆತಂಕಗೊಂಡಿದ್ದ ಚಿತ್ರತಂಡ ಹೈಕೋರ್ಟ್ ಮೆಟ್ಟಿಲೇರಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.