ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಗೆ ಯತ್ನ :ಕಾಲೇಜು ಮಾನ್ಯತೆ ರದ್ದು

Published : Mar 13, 2017, 10:47 AM ISTUpdated : Apr 11, 2018, 12:55 PM IST
ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಗೆ ಯತ್ನ :ಕಾಲೇಜು ಮಾನ್ಯತೆ ರದ್ದು

ಸಾರಾಂಶ

ಜತೆಗೆ ಮಾನ್ವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ  ಹಿರಿಯ ಉಪನ್ಯಾಸಕ ಸಿ.ಎಸ್.ವಿಜಯ್ ರಾವ್ ಕರ್ತವ್ಯ ಲೋಪದ ಆರೋಪದಡಿ ತಕ್ಷಣದಿಂದಲೇ ಅಮಾನತು ಮಾಡಲಾಗಿದ್ದು, ರಾಯಚೂರು ಎಸ್ ಪಿ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

ರಾಯಚೂರು(ಮಾ.13): ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಗೆ ಯತ್ನಿಸಿದ ಅರೆಕಾಲಿಕ ಉಪನ್ಯಾಸಕ, ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ನಿರ್ದೇಶಕನ ವಿರುದ್ಧ ಸರ್ಕಾರ ತನಿಖೆಗೆ ಆದೇಶಿಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಇಂದು ಬೆಳಗ್ಗೆ ಅರೆಕಾಲಿಕ ಉಪನ್ಯಾಸಕ ಸಿದ್ದನಗೌಡ್  ಪರೀಕ್ಷಾ ಮೇಲ್ವಿಚಾರಕರ ಸೋಗಿನಲ್ಲಿ ಪರೀಕ್ಷಾ ಕೊಠಡಿಗೆ ಪ್ರವೇಶಿಸಿ ಸಂಖ್ಯಾಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಗೆ ಯತ್ನಿಸಿದ್ದಾನೆ.ಬಳಿಕ ತಾವೂ ಕಾರ್ಯನಿರ್ವಹಿಸುತ್ತಿದ್ದ ಕಾಳಿಂಗ  ಕಾಲೇಜು ಪ್ರಿನ್ಸಿಪಾಲ್ ಮಹೇಶ್ ಹಾಗೂ ನಿರ್ದೇಶಕ ಶರಣಬಸಪ್ಪ ಅವರಿಗೆ ಪ್ರಶ್ನೆ ಪತ್ರಿಕೆ ನೀಡಿದ್ದು ವಾಟ್ಸಾಪ್ ಮೂಲಕ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮೂವರ ವಿರುದ್ಧ ರಾಜ್ಯ ಸರ್ಕಾರ ದೂರು ದಾಖಲಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಜತೆಗೆ ಮಾನ್ವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ  ಹಿರಿಯ ಉಪನ್ಯಾಸಕ ಸಿ.ಎಸ್.ವಿಜಯ್ ರಾವ್ ಕರ್ತವ್ಯ ಲೋಪದ ಆರೋಪದಡಿ ತಕ್ಷಣದಿಂದಲೇ ಅಮಾನತು ಮಾಡಲಾಗಿದ್ದು, ರಾಯಚೂರು ಎಸ್ ಪಿ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಘಟನೆಯಿಂದ ಎಚ್ಚೆತ್ತುಕೊಂಡಿರುವ ಪಿಯು ಬೋರ್ಡ್ ಪರೀಕ್ಷಾ ಕೊಠಡಿಯಲ್ಲಿ ಎಲೆಕ್ಟ್ರಾನಿಕ್ ಯಂತ್ರಗಳನ್ನು ಸಿಬ್ಬಂದಿಗಳು ಬಳಕೆ ಮಾಡದಂತೆ ಕಟ್ಟುನಿಟ್ಟಿನ ಆದೇಶವನ್ನೂ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಲಕ್ಷ್ಮೇಶ್ವರ ಪುರಸಭೆ!
ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!