
ತಿರುವನಂತಪುರ(ಫೆ.24): ದಕ್ಷಿಣ ಕನ್ನಡದ ಖ್ಯಾತ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪಲ್ಸರ್ ಸುನಿಲ್ನನ್ನ ಪೊಲೀಸರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿದ್ದಾರೆ. ಘಟನೆ ನಡೆದ ಒಂದು ವಾರದ ಬಳಿಕ ಸೆರೆ ಸಿಕ್ಕ ಪಲ್ಸರ್ ಸುನಿಲ್, ಹಲವು ವಿಚಾರ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆದರೆ, ಈ ನಟಿ ಪ್ರಕರಣ ಹೊರತುಪಡಿಸಿ ಬೇರೆ ಯಾವುದೇ ನಟಿಗೆ ಈ ರೀತಿಯ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾನೆ ಎಂದು ಮೂಲಗಳು ಹೇಳಿವೆ. ನಿನ್ನೆ ರಾತ್ರಿಯಿಡೀ ಚಿತ್ರನಟಿಯನ್ನು ಕಾರ್ನಲ್ಲಿ ಎಲ್ಲೆಲ್ಲಿಗೆ ಕರೆದುಕೊಂಡು ಹೋಗಿದ್ದರೋ..ಆ ಎಲ್ಲ ಪ್ರದೇಶಗಳಿಗೂ ಪೊಲಿಸರು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ಚಿತ್ರನಟಿ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಸುನಿಲ್, ತನಗೆ ಸುಪಾರಿ ಕೊಟ್ಟವರು ಯಾರು ಎಂಬ ವಿಚಾರವನ್ನೂ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆದರೆ, ಯಾವುದೂ ಇನ್ನೂ ಅಧಿಕೃತವಾಗಿಲ್ಲ. ಆರೋಪಿಯನ್ನು ಅಲುವಾ ಮ್ಯಾಜಿಸ್ಟೇಟ್ ಕೋರ್ಟ್ ಬಳಿ ಕರೆತರಲಾಗಿದ್ದು ಕೋರ್ಟ್ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.