
ಬೆಂಗಳೂರು: ಆರೋಗ್ಯ ಇಲಾಖೆಯು ಜ.28 ರಂದು ಭಾನುವಾರ ‘ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮ’ ಹಮ್ಮಿಕೊಂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 10.32 ಲಕ್ಷ ಮಕ್ಕಳು ಸೇರಿ ರಾಜ್ಯಾದ್ಯಂತ 5 ವರ್ಷದೊಳಗಿನ 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಕ್ಕಳಿಗೆ ಲಸಿಕೆ ಹಾಕುವ ಸಲುವಾಗಿ 3,347 ಲಸಿಕಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ 32,437 ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. 52, 972 ತಂಡಗಳ 1,03,944 ಲಸಿಕಾ ಕಾರ್ಯಕರ್ತರು, 6,546 ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ವಿಮಾನ ನಿಲ್ದಾಣಗಳಲ್ಲಿಯೂ ಲಸಿಕೆ ಹಾಕಲಾಗುವುದು. ವಲಸಿಗರು, ಅಲೆಮಾರಿಗಳ ಮಕ್ಕಳಿಗೂ ಪೋಲಿಯೋ ಲಿಸಿಕೆ ಹಾಕುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.