
ವಿಜಯಪುರ[ಫೆ.16] ಯೋಧರ ಮೇಲಿನ ದಾಳಿ ಬಗ್ಗೆ ಕಾಂಗ್ರೆಸ್ ಮುಖಂಡರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಸ್.ಎಮ್. ಪಾಟೀಲ್ ಗಣಿಯಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾರತ ಸರ್ಕಾರ ಪಾಕಿಸ್ತಾನಕ್ಕೆ ಗುರಿಮಾಡಿ ಮಾತಾಡುವುದು ತಪ್ಪು. ಕಳೆದ 30 ವರ್ಷಗಳಿಂದ ಕೂಡಾ ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಯುತ್ತಿದೆ. ಕಾಶ್ಮೀರದಲ್ಲಿ ನಡೆದ ಘಟನೆಗೆ ಗೌರ್ನರ್ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಅದರ ಕುರಿತು ತನಿಖೆ ಆಗಬೇಕು. ಇದಲ್ಲದೆ ಕಳೆದ 4 ವರ್ಷಗಳ ಅವಧಿಯಲ್ಲಿ ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.
ಪಾಕ್ ಗಡಿಯಲ್ಲಿ ಭಾರತೀಯ ಯುದ್ಧ ವಿಮಾನಗಳ ಹಾರಾಟ, ಯಾವುದರ ಸೂಚನೆ
ಮೊದಲು ಇವುಗಳ ಮೂಲ ಕಂಡು ಹಿಡಿಯಬೇಕು. ಅದನ್ನು ಹೊರತುಪಡಿಸಿ ಪಾಕ್ ಗೆ ಬೊಟ್ಟು ಮಾಡಿ ತೋರಿಸುವುದರಿಂದ ಮತ್ತು ಭಾರತದಲ್ಲಿ ದ್ವಜ ಹಿಡಿದುಕೊಂಡು ಓಡಾಡುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಹೇಳಿದ್ದು ಟೀಕೆಗೆ ಗುರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.