
ಬೆಂಗಳೂರು : ಅನಂತಪುರಲ್ಲಿ ಪುನೀತ್ ರಾಜ್ ಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡು ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.
ಸದಾಶಿವನಗರದಲ್ಲಿರುವ ಮನೆಗೆ ವಾಪಸ್ ಆಗಿದ್ದು, ಅಪಘಾತದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ನಾವು ಶೋಟಿಂಗ್ ಮುಗಿಸಿಕೊಂಡು ವಾಪಸ್ ಬರುವಾಗ, ಅನಂತಪುರ ಬಳಿ ರೋಡ್ ನಲ್ಲಿ ಇದ್ದ ಗುಂಡಿ ಕಾಣಲಿಲ್ಲ. ಆಗ ಗುಂಡಿಗೆ ಕಾರಿನ ಟೈರ್ ಹೊಡೆದು ಕಾರ್ ಟೈರ್ ಓಪನ್ ಆಗಿತ್ತು.
ಅದೃಷ್ಟವಶಾತ್ ಈ ವೇಳೆ ಯಾರಿಗೂ ಯಾವ ಸಮಸ್ಯೆಯೂ ಕೂಡ ಆಗಲಿಲ್ಲ. ನನ್ನ ಜೊತೆ ಇದ್ದವರಿಗೆ ಸ್ವಲ್ಪ ಮೂಗಿಗೆ ಗಾಯವಾಗಿದೆ. ಆಭಿಮಾನಿಗಳು ಆತಂಕ ಪಡುವ ಆಗತ್ಯವಿಲ್ಲ. ತಮಗೆ ಯಾವ ಸಮಸ್ಯೆಯೂ ಆಗಿಲ್ಲ, ತಾವು ಚೆನ್ನಾಗಿರುವುದಾಗಿ ಅವರು ಹೇಳಿದ್ದಾರೆ.
ಅಲ್ಲದೇ ತಮ್ಮ ಬಗ್ಗೆ ಕಾಳಜಿ ತೋರಿದ ಎಲ್ಲರಿಗೂ ಧನ್ಯವಾದ ಎಂದು ನಟ ಪುನೀತ್ ರಾಜ್ ಕುಮಾರ್ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.