
ಪಾಂಡವಪುರ: ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಪಾಂಡವಪುರಕ್ಕೆ ಆಗಮಿಸಿದಾಗ ಇತ್ತೀಚೆಗೆ ನಿಧನರಾದ ರೈತ ನಾಯಕ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿಯಾದದ್ದು ವಿಶೇಷವಾಗಿತ್ತು.
ಪಾಂಡವಪುರ ತಾಲೂಕಿನ ರೈಲ್ವೆ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ದರ್ಶನ್ ಪುಟ್ಟಣ್ಣಯ್ಯ ರೈತರ ಪರವಾಗಿ ಮನವಿ ನೀಡಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗಿಂತ ಹೆಚ್ಚಾಗಿ ರೈತಸಂಘದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದು ಹಸಿರು ಟವಲ್ ಬೀಸುವುದರ ಮೂಲಕ ರಾಹುಲ್ ಗಾಂಧಿಯನ್ನು ಸ್ವಾಗತಿಸಿದರು.
ದರ್ಶನ್ ಅವರನ್ನು ಸಿದ್ದರಾಮಯ್ಯ ಅವರು ರಾಹುಲ್‌ಗೆ ಪರಿಚಯಿಸಿದಾಗ ಬೆನ್ನು ತಟ್ಟಿದ ರಾಹುಲ್ ತಮ್ಮನ್ನು ಪ್ರತ್ಯೇಕವಾಗಿ ಭೇಟಿ ಮಾಡುವಂತೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.