
ಚಾಮರಾಜನಗರ: ಕರ್ನಾಟಕಕ್ಕೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ. ಆದರೆ ನನಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಪುನರುಚ್ಚರಿಸಿದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಚಾಮರಾಜನಗರಕ್ಕೆ ಭೇಟಿ ನೀಡಿದ ಪುಟ್ಟರಂಗಶೆಟ್ಟಿ, ಚಾಮರಾಜೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನನಗೆ ಮಂತ್ರಿ ಸ್ಥಾನ ನೀಡುವುದಾಗಿ ಚುನಾವಣೆಗೂ ಮೊದಲೇ ಚಾಮರಾಜ ನಗರಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಅದರಂತೆ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಹಿಂದುಳಿದವರ ಪಾಲಿಗೆ ಸಿದ್ದರಾಮಯ್ಯ ಮತ್ತೊಬ್ಬ ದೇವರಾಜ ಅರಸು ಇದ್ದಂತೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.