
ಚಾಮರಾಜನಗರ : ನಾನು ಇನ್ನೂ ಎರಡು ವರ್ಷ ಮಾತ್ರ ಸಚಿವನಾಗಿರುವೆ. ಎರಡು ವರ್ಷದ ನಂತರ ಹನೂರು ಶಾಸಕ ಆರ್. ನರೇಂದ್ರ ಸಚಿವ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಚಾಮರಾಜನಗರದಲ್ಲಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂವಾದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಈ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಡಬೇಕು ಎಂದಿದ್ದಾರೆ. ನೀನು ಎರಡು ವರ್ಷ ಮಾತ್ರ ಮಂತ್ರಿಯಾಗಿ ನಂತರ ಸ್ಥಾನ ತ್ಯಜಿಸಬೇಕು ಎಂದು ಈ ಮೊದಲೇ ಅವರು ತಿಳಿಸಿದ್ದಾರೆ. ಅದರಂತೆ ಎರಡು ವರ್ಷ ಆದಮೇಲೆ ನರೇಂದ್ರಗೆ ಮಂತ್ರಿ ಸ್ಥಾನ ಬಿಟ್ಟುಕೊಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.