
ಬೆಂಗಳೂರು[ಜು.10]: ಆಡಳಿತಾರೂಢ ಪಕ್ಷಗಳ ಶಾಸಕರನ್ನು ವಾಪಸ್ ಕರೆತರಲು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮುಂಬೈಗೆ ತೆರಳುವ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಮಂಗಳವಾರ ಸಂಜೆಯೇ ತರಾತುರಿಯಲ್ಲಿ ಬಿಜೆಪಿ ನಾಯಕ ಆರ್.ಅಶೋಕ್ ಮತ್ತು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಮುಂಬೈಗೆ ತೆರಳಿದರು.
ಅತೃಪ್ತ ಶಾಸಕರನ್ನು ವಾಪಸ್ ಕರೆತರುವ ಸಂಬಂಧ ಮನವೊಲಿಸುವ ಪ್ರಯತ್ನ ಮಾಡುವ ಸಂಬಂಧ ಶಿವಕುಮಾರ್ ಅವರು ಬುಧವಾರ ಬೆಳಗ್ಗೆ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿವರೆಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸುದೀರ್ಘವಾಗಿ ಮಾತುಕತೆ ನಡೆಸಿದರು.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶಿವಕುಮಾರ್ ಅವರು ರಾಜೀನಾಮೆ ನೀಡಿರುವ ಶಾಸಕರನ್ನು ವಾಪಸ್ ಕರೆದೊಯ್ಯುವ ಪ್ರಯತ್ನ ನಡೆಸಬಹುದು ಎಂಬ ಭೀತಿಯಿಂದ ಅಶೋಕ್ ಮತ್ತು ಬೋಪಯ್ಯ ಅವರು ಮಂಗಳವಾರ ರಾತ್ರಿಯೇ ಮುಂಬೈ ತಲುಪಿ ಶಾಸಕರನ್ನು ಭೇಟಿ ಮಾಡಿದರು.
ಕಾಂಗ್ರೆಸ್ಸಿನ ಹಾಗೂ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಶಿವಕುಮಾರ್ ಅವರು ಅತೃಪ್ತ ಶಾಸಕರನ್ನು ಭೇಟಿ ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಿದೆ. ಶಿವಕುಮಾರ್ ಭೇಟಿ ಮಾಡಬಹುದು ಎಂಬ ಉದ್ದೇಶದಿಂದ ಅತೃಪ್ತ ಶಾಸಕರ ವಾಸ್ತವ್ಯವನ್ನು ಮಂಗಳವಾರ ರಾತ್ರಿಯೇ ಇದುವರೆಗಿದ್ದ ಹೋಟೆಲ್‌ನಿಂದ ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.