ಮುಚ್ಚಲಿದೆಯಾ ಬೆಂಗಳೂರಿನ ರೇಸ್ ಕೋರ್ಸ್..?

Published : Dec 18, 2018, 10:39 AM IST
ಮುಚ್ಚಲಿದೆಯಾ ಬೆಂಗಳೂರಿನ ರೇಸ್ ಕೋರ್ಸ್..?

ಸಾರಾಂಶ

ಬೆಂಗಳೂರಿನ ಪ್ರಸಿದ್ಧ ರೇಸ್‌ಕೋರ್ಸ್, ಗಾಲ್ಫ್ ಮೈದಾನಗಳು ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದ್ದು ಇವುಗಳನ್ನು ಮುಚ್ಚಿಬಿಡಿ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರು : ಇಲ್ಲಿರುವ ರೇಸ್‌ಕೋರ್ಸ್, ಗಾಲ್ಫ್ ಮೈದಾನಗಳನ್ನು ಮುಚ್ಚಿಬಿಡಿ. ಇದು ಕೂಡ ವಾಹನ ದಟ್ಟಣೆಗೆ ಕಾರಣವಾಗುತ್ತದೆ ಎಂದು ಬಿಜೆಪಿ ಆರ್.ಅಶೋಕ್ ಸರ್ಕಾರವನ್ನು ಒತ್ತಾಯಿಸಿದರು. 

ಬೆಂಗಳೂರಲ್ಲಿನ ವಾಹನ ದಟ್ಟಣೆ ಕುರಿತು ಚರ್ಚೆ ವೇಳೆ ಈ ಒತ್ತಾಯ ಮಾಡಿದ ಅವರು, ಶುಕ್ರವಾರ, ಶನಿವಾರ ಹಾಗೂ ಭಾನುವಾರ ರೇಸ್‌ಕೋರ್ಸ್ ರಸ್ತೆಯಲ್ಲಿ ತಿರುಗಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರು ದುಡಿದ್ದರಲ್ಲಿ ಹೆಚ್ಚಿನ ಪಾಲನ್ನು ಇಲ್ಲಿಯೇ ಕಳೆದುಕೊಳ್ಳುತ್ತಿದ್ದಾರೆ. 

ಹಿಂದೆ ಯಾವಾಗಲೋ ನೀಡಿದ ಭೂಮಿಯಿದು. ಇದನ್ನು ಸರ್ಕಾರ ಮತ್ತೆ ತನ್ನ ವಶಕ್ಕೆ ಪಡೆದುಕೊಂಡರೆ ತಾನಾಗಿಯೇ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹಲವೆಡೆ ಇಂದು ಪವರ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ