ಕಾಂಗ್ರೆಸ್‌ ಬಣ್ಣ ಬಯಲು ಮಾಡಲು ಬಿಜೆಪಿಯಿಂದ 70 ಸುದ್ದಿಗೋಷ್ಠಿ!

Published : Dec 17, 2018, 12:27 PM IST
ಕಾಂಗ್ರೆಸ್‌ ಬಣ್ಣ ಬಯಲು ಮಾಡಲು ಬಿಜೆಪಿಯಿಂದ 70 ಸುದ್ದಿಗೋಷ್ಠಿ!

ಸಾರಾಂಶ

ರಫೇಲ್ ಒಪ್ಪಂದವನ್ನು ಒಂದು ಹಗರಣ ಎಂದು ಬಿಂಬಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹೇಗೆ ಪಿತೂರಿ ಮಾಡಿದೆ ಎಂಬುದನ್ನು ಬಯಲು ಮಾಡಲು ಬಿಜೆಪಿ 70 ಸುದ್ದಿಗೋಷ್ಠಿಗಳನ್ನು ಆಯೋಜಿಸಿದೆ.

ನವದೆಹಲಿ[ಡಿ.17]: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಒಂದು ಹಗರಣ ಎಂದು ಬಿಂಬಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹೇಗೆ ಪಿತೂರಿ ಮಾಡಿದೆ ಎಂಬುದನ್ನು ಬಯಲು ಮಾಡಲು ಬಿಜೆಪಿ ಸೋಮವಾರ (ಇಂದು) ರಾಷ್ಟಾ್ರದ್ಯಂತ 70 ಸರಣಿ ಪತ್ರಿಕಾಗೋಷ್ಠಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ದೇಶದ ರಕ್ಷಣಾ ಸಚಿವಾಲಯ ಘನತೆಗೆ ಕುಂದುಂಟು ಮಾಡುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂಬುದನ್ನು ಬಿಜೆಪಿ ದೇಶದ ಜನತೆಗೆ ಮನವರಿಕೆ ಮಾಡಿಕೊಡಲು ನಿರ್ಧರಿಸಿದೆ.

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿ ತನಿಖೆ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸುಪ್ರೀಂ ತೀರ್ಪು ನೀಡಿತ್ತು. ಆ ನಂತರ ತೀರ್ಪಿನ ಕೆಲ ಅಂಶಗಳನ್ನು ತಿದ್ದುಪಡಿ ಮಾಡಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ ಬೆನ್ನಲ್ಲೇ, ಬಿಜೆಪಿ ದೇಶಾದ್ಯಂತ ಸೋಮವಾರ 70 ಸುದ್ದಿಗೋಷ್ಠಿಗಳನ್ನು ನಡೆಸಲು ನಿಶ್ಚಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು