
ನವದೆಹಲಿ(ಡಿ.16): ನೋಟ್ ಬ್ಯಾನ್'ನಿಂದ ಕಂಗಾಲಾಗಿರುವ ರೈತರಿಗೆ ಮೋದಿ ಸರ್ಕಾರ ಬಹುದೊಡ್ಡ ಗಿಫ್ಟ್ ಕೊಡಲಿದೆ. ಕೆಲ ದಿನಗಳಲ್ಲೇ ಎಲ್ಲಾ ರೈತರಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕಾಂಗ್ರೆಸ್ ಪಕ್ಷ ರೈತರ ಸಮಸ್ಯೆಗಳನ್ನು ವಿವರಿಸಿದ್ದಾರೆ ಈ ವೇಳೆ 'ಕೃಷಿ ಸಾಲಕ್ಕಾಗಿ ರೈತರು ಎದುರಿಸುತ್ತಿರುವ ಸಮಸ್ಯೆ ನಿವಾರಿಸುವುದರೊಂದಿಗೆ ರೈತರಿಗೆ ಉಚಿತ ವಿದ್ಯುತ್ ಸೌಲಭ್ಯನ್ನೂ ಒದಗಿಸಿಕೊಡುವಂತೆ ರಾಹುಲ್ ಗಾಂಧಿ ಪ್ರಧಾನಿಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ರೈತರ ಾತ್ಮಹತ್ಯೆ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಈ ವೇಳೆ ರೈತರ ಹಸ್ತಾಕ್ಷರವಿದ್ದ ಒಂದು ವಿಜ್ಞಾಪನೆಯನ್ನು ಪ್ರಧಾನಿ ಮೋದಿಗೆ ಸಲ್ಲಿಸಿದ್ದು, ಇದರಲ್ಲಿ ರೈತರೇ ಉಚಿತ ವಿದ್ಯತ್ ಸೌಲಭ್ಯ ನೀಡುವಂತೆ ಕೇಳಿಕೊಂಡಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿಯೂ 'ಆಗಾಗ್ಗೆ ಭೇಟಿ ಮಾಡುತ್ತಿರಿ' ಎಂದು ರಾಹುಲ್ ಗಾಂಧಿಯ ಬಳಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನೋಟ್ ಬ್ಯಾನ್ ಬಳಿಕ ಮೋದಿ ಸರ್ಕಾರವನ್ನು ನಿರಂತರವಾಗಿ ಠೀಕಿಸುತ್ತಾ ಬಂದಿದ್ದ ರಾಹುಲ್ ಗಾಂಧಿಯ ಈ ಭೇಟಿ ದೇಶಾದ್ಯಂತ ಭಾರೀ ಸದ್ದು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.