ಒಂದೇ ದಿನ 2 ಪಕ್ಷಗಳ ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮನ

Published : Aug 01, 2017, 06:05 PM ISTUpdated : Apr 11, 2018, 01:08 PM IST
ಒಂದೇ ದಿನ 2 ಪಕ್ಷಗಳ ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮನ

ಸಾರಾಂಶ

ವಿಧಾನಸಭಾ ಚುನಾವಣೆಗೆ ಎರಡೂ ಪಕ್ಷಗಳ ನಾಯಕರು ಈಗಲೇ ಸಜ್ಜಾಗುತ್ತಿದ್ದಾರೆ.

ಬೆಂಗಳೂರು(.01): ಒಂದೇ ದಿನ ಎರಡೂ ರಾಷ್ಟ್ರೀಯ ಪಕ್ಷಗಳ ಮೇರು ನಾಯಕರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

ಆಗಸ್ಟ್​ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ಎರಡೂ ಪಕ್ಷಗಳ ನಾಯಕರು ಈಗಲೇ ಸಜ್ಜಾಗುತ್ತಿದ್ದಾರೆ.

ರಾಯಚೂರಿನಲ್ಲಿ ಆಗಸ್ಟ್ 12ರಂದು ರಾಜ್ಯಕ್ಕೆ ಬರುತ್ತಿದ್ದಾರೆ. ಆ.4ರಂದು ರಾಯಚೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಆಗಮಿಸಬೇಕಿತ್ತು. ಆದರೆ ಧರಂ ಸಿಂಗ್ ನಿಧನ, ರಾಜ್ಯಸಭೆ ಹಾಗೂ ಉಪರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಭೇಟಿ ರದ್ದಾಗಿತ್ತು.  

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್​ 12ರಿಂದ ವಿಧಾನಸಭಾ ಚುನಾವಣಾ ತಯಾರಿಗಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯದ್ಯಾಂತ 3 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ