
ಶೃಂಗೇರಿ: ಶ್ರೀ ಮಠದ ಭಾರತೀ ತೀರ್ಥ ಶ್ರೀಗಳನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿ, ಆಶೀರ್ವಾದ ಪಡೆದರು.
ಮೊದಲು ಶ್ರೀಗಳನ್ನು ಭೇಟಿಯಾಗಿ ರಾಹುಲ್ ಗಾಂಧಿ ಆಶೀರ್ವಾದ ಪಡೆದರು. ಅವರೊಂದಿಗೆ ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಇದ್ದರು.
ಶೃಂಗೇರಿ ಮಠದ ನರಸಿಂಹ ವನದಲ್ಲಿ ಶ್ರೀಗಳನ್ನು ಕಾಂಗ್ರೆಸ್ ಮುಖಂಡರು ಭೇಟಿಯಾಗಿ, ಆಶೀರ್ವಾದ ಪಡೆದರು. ಕೆಲ ಹೊತ್ತಿನ ಬಳಿಕ ಶ್ರೀಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದರು.
ಮೊದಲು ರಾಹುಲ್ ಅವರೊಂದಿಗೆ ಶ್ರೀಗಳನ್ನು ಭೇಟಿಯಾಗಲು ಸಿಎಂ ತೆರಳದ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ, ಶಾರದಾಂಬೆ ದೇವಾಲಯದಲ್ಲಿ ದರ್ಶನದ ಬಳಿಕ ಪಾಕಶಾಲೆಗೆ ಸಿಎಂ ಹೋಗಿದ್ದರಿಂದ, ಶ್ರೀಗಳ ಭೇಟಿಯಲ್ಲಿ ವಿಳಂಬವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.