
ನವದೆಹಲಿ (ಮಾ. 06): ಲೋಕಸಭಾ ಚುನಾವಣಾ ಸೀಟು ಹಂಚಿಕೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ನಡುವೆ ಒಂದು ಸುತ್ತಿನ ಮಾತುಕತೆ ಮುಕ್ತಾಯಗೊಂಡಿದೆ.
'ಪೊಲಿಟಿಕಲ್' ಬೈಟ್: ಮಗಳ ಭವಿಷ್ಯಕ್ಕಿಂತ ಸಾರ್ವಜನಿಕರ ಭವಿಷ್ಯಕ್ಕೆ ಬೆಲೆ ಕೊಡ್ತೇನೆ
ಸುಮಾರು ಒಂದು ಮುಕ್ಕಾಲು ಗಂಟೆ ಮಾತುಕತೆ ನಡೆಸಿದ್ದಾರೆ. ‘ನಾವು 10 ಸ್ಥಾನ ಕೇಳಿದ್ದೇವೆ. ಮುಂದಿನ ಮಾತುಕತೆಯನ್ನು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ ಡ್ಯಾನೀಶ್ ಆಲಿ ಮತ್ತು ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣು ಗೋಪಾಲ್ ನಡೆಸಲಿದ್ದಾರೆ ‘ ಎಂದು ದೇವೇಗೌಡರು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕಣ: ಸುಮಲತಾ ಬೆಂಬಲಕ್ಕೆ ಕೈ ನಾಯಕರು?
ಮಂಡ್ಯದಲ್ಲಿ ಸದ್ಯ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ. ಸುಮಲತಾ-ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಕಗ್ಗಂಟಾಗಿ ಉಳಿದಿದೆ. ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡಲಾಗುವುದಿಲ್ಲ ಎಂಬ ಕಾಂಗ್ರೆಸ್ ನಾಯಕರ ಬಿಗಿ ಪಟ್ಟಿನಿಂದಾಗಿ ಸೀಟು ಹಂಚಿಕೆ ಕಗ್ಗಂಟಾಗಿ ಉಳಿದಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ- ದೇವೇಗೌಡರ ಭೇಟಿ ಮಹತ್ವ ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.