100 ಪರ್ಸೆಂಟ್ ನಿಮ್ಮೊಂದಿಗಿದ್ದೇವೆ: ಜೇಟ್ಲಿಗೆ ಹಾರೈಸಿದ ರಾಹುಲ್!

Published : Jan 17, 2019, 11:58 AM IST
100 ಪರ್ಸೆಂಟ್ ನಿಮ್ಮೊಂದಿಗಿದ್ದೇವೆ: ಜೇಟ್ಲಿಗೆ ಹಾರೈಸಿದ ರಾಹುಲ್!

ಸಾರಾಂಶ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಕ್ಯಾನ್ಸರ್ ಶಂಕೆ| ಚಿಕಿತ್ಸೆಗೆ ಅಮೆರಿಕಕ್ಕೆ ತೆರಳಿರುವ ಅರುಣ್ ಜೇಟ್ಲಿ| ಜೇಟ್ಲಿ ಆರೋಗ್ಯ ಸುಧಾರಣೆಗೆ ಹಾರೈಸಿ ರಾಹುಲ್ ಗಾಂಧಿ ಟ್ವೀಟ್| ಜೇಟ್ಲಿ ಜೊತೆಗಿರುವ ಭರವಸೆ ನೀಡಿದ ಕಾಂಗ್ರೆಸ್ ಅಧ್ಯಕ್ಷ| ಜೇಟ್ಲಿ ಆರೋಗ್ಯ ಸುಧಾರಣೆಗೆ ಪಿ. ಚಿದಂಬರಂ ಟ್ವೀಟ್

ನವದೆಹಲಿ(ಜ.17): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿರುವ ಶಂಕೆ ವ್ಯಕ್ತವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಜೇಟ್ಲಿ ಆರೋಗ್ಯದ ಕುರಿತು ಚಿಂತಾಕ್ರಾಂತನಾಗಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅಲ್ಲದೇ ಈ ಸಂದರ್ಭದಲ್ಲಿ ಶೇ.100 ರಷ್ಟು ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ.

ಇನ್ನು ಜೇಟ್ಲಿ ಆರೋಗ್ಯ ಸುಧಾರಣೆ ಬಯಸಿ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಕೂಡ ಟ್ವೀಟ್ ಮಾಡಿದ್ದಾರೆ.

‘ತಮ್ಮ ಸಹೋದ್ಯೋಗಿ ಹಾಗೂ ನ್ಯಾಯವಾದಿಯಾಗಿರುವ ಜೇಟ್ಲಿಯವರ ಅನಾರೋಗ್ಯ ವಿಷಯ ಕೇಳಿ ತೀವ್ರ ದುಃಖವಾಯಿತು. ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ: ಪೊಲೀಸ್‌ ಕನಸು ಈಡೇರದಾಗ ಸುಲಿಗೆ ಕೃತ್ಯ
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ: 30 ಕೇಬಲ್‌ ಅಳವಡಿಕೆ ಮಾತ್ರ ಬಾಕಿ