
ನವದೆಹಲಿ (ನ.19): ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ನಡೆಯಲಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲು ಗಾಂಧಿಗೆ ಅಧ್ಯಕ್ಷ ಪಟ್ಟಕ್ಕೆ ತರುವ ಮಾತುಗಳು ಮತ್ತೆ ಮುನ್ನೇಲೆಗೆ ಬಂದಿದು ಇಂದು ನಡೆಯುವ ಸಭೆ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆ ನಿಶ್ಚಲವಾಗಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದು ಖಚಿತವಾಗಿದ್ದು, ರಾಹುಲ್ ಎದರು ಸ್ಪರ್ಧಿಸಲು ಇದುವರೆಗೂ ಯಾವುದೇ ಮುಖಂಡರು ಆಸಕ್ತಿ ವಹಿಸಿಲ್ಲ. ಹೀಗಾಗಿ ರಾಹುಲ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ರಾಹುಲ್ ಆಯ್ಕೆಗೆ ಗ್ರೀನ್ ಸೀಗ್ನಲ್ ನೀಡಿವೆ ಎನ್ನಲಾಗಿದೆ.
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಗುಜರಾತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವ ಕುರಿತು ದೆಹಲಿಯಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆದ್ರೆ ಈ ಸಭೆ ಕೇವಲ ಔಪಚಾರಿಕವಾಗಿದ್ದು, ನಿರ್ಧಾರದಂತೆ ರಾಹುಲ್ ಗಾಂಧಿಯೇ ಅಧ್ಯಕ್ಷ ಸ್ಥಾನಕ್ಕೇರುವ ಎಲ್ಲ ಸಾಧ್ಯತೆ ಇವೆ. ಅಲ್ಲದೇ ಈ ವಿಷಯದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿರ್ಧಾರವೇ ಅಂತಿಮ ಎನ್ನಲಾಗುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ನ 25 ಪ್ರಮುಖ ಮುಖಂಡರ ಸಭೆ ನಡೆಯಲಿದ್ದು, ಸೋನಿಯಾ ಗಾಂಧಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಗುಜರಾತ್ ಚುನಾವಣೆಗೆ ಮುನ್ನ ಅಂದ್ರೆ, ಡಿಸೆಂಬರ್ 1 ರೊಳಗೆ ರಾಹುಲ್ ಗಾಂಧಿಗೆ ಪಟ್ಟ ಕಟ್ಟುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.