
ನವದೆಹಲಿ (ಅ.06): ವಿಐಪಿಗಳು ಬರುತ್ತಾರೆಂದರೆ ಅವರು ಹೋಗುವವರೆಗೆ ಆ ರಸ್ತೆಯಲ್ಲಿ ಬೇರೆ ವಾಹನಗಳನ್ನು ಬಿಡುವುದಿಲ್ಲ. ಟ್ರಾಫಿಕ್ ಜಾಮ್ ಕ್ರಿಯೇಟ್ ಆಗಿ ಗಂಟೆಗಟ್ಟಲೆ ಕಾಯುವ ಗೋಳು ಜನಸಾಮಾನ್ಯರದ್ದು.
ರಾಷ್ಟ್ರ ರಾಜಧಾನಿಯಲ್ಲಿಂದು ಸಂಜೆ ಅದೇ ಪರಿಸ್ಥಿತಿ ನಿರ್ಮಾಣವಾಗಲಿದೆ. ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣಾ ಪ್ರಚಾರಕ್ಕಾಗಿ ಹೋಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ದೆಹಲಿಗೆ ವಾಪಸ್ಸಾಗಲಿದ್ದಾರೆ. ಹಾಗಾಗಿ ಇಂದು ಸಂಜೆ ದೆಹಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಹುದೆಂದು ನಿರೀಕ್ಷಿಸಲಾಗಿದೆ.
ಆದರೆ ಎಂದಿನಂತೆ ಕಾರಿನಲ್ಲಿ ಬರದೇ ಬಸ್ ನಲ್ಲಿ ಬರಲಿದ್ದಾರೆ. 500 ಬಸ್’ಗಳಲ್ಲಿ ಕಾಂಗ್ರೆಸ್ ಬೆಂಬಲಿಗರು ಸಾಥ್ ನೀಡಲಿದ್ದಾರೆ. ಜಂತರ್ ಮಂತರ್ ರಸ್ತೆ ಸಮೀಪದ ರಸ್ತೆಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.