
ನವದೆಹಲಿ (ಡಿ.11: ನಿರೀಕ್ಷೆಯಂತೆ ಎಐಎಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಅಧಿಪತ್ಯ ವಹಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ.
ಇದೇ ಡಿಸೆಂಬರ್ 16 ರಂದು ಪಟ್ಟಾಭಿಷೇಕ ನಡೆಯೋದು ಖಚಿತವಾಗಿದೆ. ಆ ಮೂಲಕ ಕಳೆದೆರಡು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ಆಳಿದ್ದ ಸೋನಿಯಾಗಾಂಧಿ ಅವರ ಯುಗಾಂತ್ಯ ಸನಿಹವಾಗಿದ್ದು, 47 ವರ್ಷದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧಿಪತ್ಯವಹಿಸಲಿದ್ದಾರೆ. ಮೂಲಗಳ ಪ್ರಕಾರ ಇಂದೇ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಯಾಕಂದರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಈವರೆಗೂ ರಾಹುಲ್ ಗಾಂಧಿ ಹೊರತುಪಡಿಸಿದರೆ ಯಾವ ನಾಯಕರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರೇ ಅವಿರೋಧವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ರಾಹುಲ್ ಅವರು ನೆರಹರೂ-ಗಾಂಧಿ ಕುಟುಂಬದಲ್ಲಿ ಈ ಹುದ್ದೆಯನ್ನು ಅಲಂಕರಿಸಲಿರುವ 6ನೇ ನಾಯಕರಾಗಲಿದ್ದಾರೆ. ಇನ್ನು ಡಿಸೆಂಬರ್ 18ರಂದು ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಎರಡು ದಿನ ಮುನ್ನ ರಾಹುಲ್ ಪಟ್ಟಾಭಿಷೇಕ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.