ರಾಹುಲ್ ಗಾಂಧಿ ಶಹರಾನ್ಪುರ ಭೇಟಿಗೆ ಅನುಮತಿ ನಿರಾಕರಣೆ

Published : May 26, 2017, 04:31 PM ISTUpdated : Apr 11, 2018, 12:39 PM IST
ರಾಹುಲ್ ಗಾಂಧಿ ಶಹರಾನ್ಪುರ ಭೇಟಿಗೆ ಅನುಮತಿ ನಿರಾಕರಣೆ

ಸಾರಾಂಶ

ಉತ್ತರ ಪ್ರದೇಶದ ಶಹರಾನ್ಪುರದಲ್ಲಿ ಜಾತಿ ಸಂಘರ್ಷ ನಡೆದ ಕಾರಣ ರಾಹುಲ್ ಗಾಂಧಿ ಭೇಟಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ನಾಳೆ ಶಹರಾನ್ಪುರಕ್ಕೆ ಭೇಟಿ ನೀಡುವವರಿದ್ದರು. ಆದರೆ ಅವರಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  

ನವದೆಹಲಿ (ಮೇ.26): ಉತ್ತರ ಪ್ರದೇಶದ ಶಹರಾನ್ಪುರದಲ್ಲಿ ಜಾತಿ ಸಂಘರ್ಷ ನಡೆದ ಕಾರಣ ರಾಹುಲ್ ಗಾಂಧಿ ಭೇಟಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ನಾಳೆ ಶಹರಾನ್ಪುರಕ್ಕೆ ಭೇಟಿ ನೀಡುವವರಿದ್ದರು. ಆದರೆ ಅವರಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  

40 ದಿನಗಳ ಹಿಂದೆ ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಮೆರವಣಿಗೆಯಲ್ಲಿ ರಾಜಪೂತ್ ಹಾಗೂ ದಲಿತರ ನಡುವೆ  ಜಗಳ ಉಂಟಾಗಿತ್ತು. ಈ ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದು ಕೆಲವರು ಗಾಯಗೊಂಡಿದ್ದರು.  ಕಳೆದ ಮಂಗಳವಾರ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶಹರಾನ್ಪುರಕ್ಕೆ ಭೇಟಿ ನೀಡಿದ ಬಳಿಕ ಗಲಾಟೆ ಮತ್ತೆ ಭುಗಿಲೆಬ್ಬಿತ್ತು. ಇದರಲ್ಲಿ ಒಬ್ಬ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜಕಾರಣಿಗಳ ಭೇಟಿಯನ್ನು ನಿರಾಕರಿಸಲಾಗಿದೆ. ಹಾಗಾಗಿ ನಾಳೆ ಭೇಟಿ ನೀಡಲಿದ್ದ ರಾಹುಲ್ ಗಾಂಧಿಗೆ ಅನುಮತಿ ನಿರಾಕರಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ