ಶಿವ ಮಂದಿರದಲ್ಲಿ ನಮಾಜ್ ಮಾಡಿದ್ರಾ ರಾಹುಲ್?: ವೈರಲ್ ಫೋಟೋ!

Published : Oct 17, 2018, 08:48 PM IST
ಶಿವ ಮಂದಿರದಲ್ಲಿ ನಮಾಜ್ ಮಾಡಿದ್ರಾ ರಾಹುಲ್?: ವೈರಲ್ ಫೋಟೋ!

ಸಾರಾಂಶ

ಮಧ್ಯಪ್ರದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ಚುನಾವಣೆ ಕಾವು! ಮಧ್ಯಪ್ರದೇಶ ಪ್ರವಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ! ದೇವಸ್ಥಾನದಲ್ಲಿ ನಮಾಜ್ ಮಾಡಿದ್ರಾ ಕಾಂಗ್ರೆಸ್ ಅಧ್ಯಕ್ಷ?! ಡಾಟಿಯಾದ ವಪಿತಾಂಬರ ಪೀತ ದೇವಸ್ಥಾನದಲ್ಲಿ ರಾಹುಲ್ ಪೂಜೆ! ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಫೇಕ್ ಫೋಟೋ       

ಇಂಧೋರ್(ಅ.17): ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.  ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇವಸ್ಥಾನವೊಂದರಲ್ಲಿ ನಮಜ್ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮಧ್ಯಪ್ರದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಡಾಟಿಯಾದ ಪಿತಾಂಬರ ಪೀತ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಮಾಡುವ ಸಂದರ್ಭದಲ್ಲಿ ರಾಹುಲ್ ನಮಾಜ್ ಮಾಡುವ ರೀತಿ ಕೈ ಜೋಡಿಸಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನೆಟಿಜನ್ ಗಳು, ದೇವಸ್ಥಾನದಲ್ಲಿ ನಮಾಜ್ ಮಾಡಿದ ರಾಹುಲ್ ಗಾಂಧಿ ಬ್ರಾಹ್ಮಣ ಅಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ರಾಹುಲ್ ಪಿತಾಂಬರ ಪೀತ ದೇವಸ್ಥಾನದಲ್ಲಿ ನಮಾಜ್ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಹುಲ್ ದೇವಸ್ಥಾನದಲ್ಲಿ ತೀರ್ಥ ಸೇವಿಸುತ್ತಿರುವ ಮಧ್ಯದಲ್ಲಿ ಕ್ಲಿಕ್ಕಿಸಿರುವ ಫೋಟೋ ಇದಾಗಿದ್ದು ಸಂಪೂರ್ಣ ಫೋಟೋವನ್ನು ಉದ್ದೇಶಪೂರ್ವಕವಾಗಿ ತೋರಿಸಿಲ್ಲ ಎಂದು ಆಪದಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!