
ಬೆಂಗಳೂರು(ಡಿ.7): ಎಐಸಿಸಿ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಮೊತ್ತಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ರಾಜ್ಯದಲ್ಲಿ ಬಿಜೆಪಿ ಓಟಕ್ಕೆ ಕಡಿವಾಣ ಹಾಕಲು 15 ಅಗ್ರ ನಾಯಕರೊಂದಿಗೆ ತಡರಾತ್ರಿವರೆಗೆ ಗುಪ್ತ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆಯ್ಕೆಯಾಗಿ ಡಿ.19ರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಾಗುತ್ತಿದ್ದಂತೆಯೇ ದೇಶಾದ್ಯಂತ ಪರ್ಯಟನೆ ನಡೆಸಲಿರುವ ಅವರು ಮೊದಲಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.