ಕರ್ನಾಟಕದಲ್ಲಿ ರಾಹುಲ್ ಗಿಮಿಕ್ ನಡೆಯಲ್ಲ: ರಾಜೀವ್ ಚಂದ್ರಶೇಖರ್

Published : Dec 25, 2017, 12:36 PM ISTUpdated : Apr 11, 2018, 01:04 PM IST
ಕರ್ನಾಟಕದಲ್ಲಿ ರಾಹುಲ್ ಗಿಮಿಕ್ ನಡೆಯಲ್ಲ: ರಾಜೀವ್ ಚಂದ್ರಶೇಖರ್

ಸಾರಾಂಶ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವರ್ಚಸ್ಸು ಯಾವುದೇ ಜಾದೂ ಮಾಡುವುದಿಲ್ಲ. ಜಾತಿ ರಾಜಕಾರಣಕ್ಕಾಗಿ ಗುಜರಾತ್ ಚುನಾವಣೆಯಲ್ಲಿ ಸೋತ ರೀತಿಯಲ್ಲೇ, ಕರ್ನಾಟಕದಲ್ಲೂ ಕಾಂಗ್ರೆಸ್ ಸೋಲಿನ ರುಚಿ ಅನುಭವಿಸಲಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರು (ಡಿ.25): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವರ್ಚಸ್ಸು ಯಾವುದೇ ಜಾದೂ ಮಾಡುವುದಿಲ್ಲ. ಜಾತಿ ರಾಜಕಾರಣಕ್ಕಾಗಿ ಗುಜರಾತ್ ಚುನಾವಣೆಯಲ್ಲಿ ಸೋತ ರೀತಿಯಲ್ಲೇ, ಕರ್ನಾಟಕದಲ್ಲೂ ಕಾಂಗ್ರೆಸ್ ಸೋಲಿನ ರುಚಿ ಅನುಭವಿಸಲಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿರುವುದು ಕಾಂಗ್ರೆಸ್‌ಗೆ ಪುನಶ್ಚೇತನ ಉಂಟು ಮಾಡಿಲ್ಲ. ಅವರ ಪದೋನ್ನತಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳಲ್ಲಿ ಪಕ್ಷವನ್ನು ಮತ್ತೊಮ್ಮೆ ಮುಳುಗುವಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಗುಜರಾತ್ ಚುನಾವಣಾ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಸರ್ಕಾರ ಕಾರ್ಯನಿರ್ವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿದ್ದು ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಯಾವಾಗಲೂ ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜನೆಯ ರಾಜಕಾರಣ ಮಾಡುತ್ತದೆ. ಕರ್ನಾಟಕದ ಸಿದ್ಧರಾಮಯ್ಯ ಸರ್ಕಾರ ಇದಕ್ಕಿಂತ ಭಿನ್ನವಾಗಿಲ್ಲ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ವಿಷಯವೇ ತೆಗೆದುಕೊಳ್ಳಿ. ಇದು ಸಮಾಜದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಇದು ಕೇವಲ ಚುನಾವಣಾ ಲಾಭಕ್ಕಾಗಿ ಲಿಂಗಾಯತ ಸಮಾಜವನ್ನು ವಿಭಜಿಸುವುದು ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಉದ್ದೇಶವಾಗಿದೆ. ಟಿಪ್ಪು ಜಯಂತಿ ಆಚರಿಸುವ ಮೂಲಕ ಸರ್ಕಾರ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ಇದರಿಂದಾಗಿ ಕರಾವಳಿ ಮತ್ತು ಕೊಡಗಿನಲ್ಲಿ ಕೋಮು ಉದ್ವಿಗ್ನತೆಗೆ ಉತ್ತೇಜನ ನೀಡಿದಂತಾಗಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಟಿ ಜನರ ಹೃದಯ ಮೀಟಿದ ಮಾನವ: ನಾನು ರಾಜಕೀಯಕ್ಕೆ ಬಂದಿದ್ದು ದೊಡ್ಡ ತಪ್ಪು ಎಂದಿದ್ದ ವಾಜಪೇಯಿ
'ತೆರಿಗೆ ಶೇ.50 ರಿಂದ 15ಕ್ಕೆ ಇಳಿಸಿ..'ಅಮೆರಿಕದ ಜೊತೆಗಿನ ಒಪ್ಪಂದಕ್ಕೆ ಕೊನೇ ಆಫರ್‌ ನೀಡಿದ ಭಾರತ!