ರಾಹುಲ್ ಗೆ ಐತಿಹಾಸಿಕ ಸೋಲು : ರಾಜಕೀಯ ತೊರೆಯುತ್ತಾರಾ ಸಿಧು..?

Published : May 24, 2019, 01:28 PM IST
ರಾಹುಲ್ ಗೆ ಐತಿಹಾಸಿಕ ಸೋಲು : ರಾಜಕೀಯ ತೊರೆಯುತ್ತಾರಾ ಸಿಧು..?

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲು ಕಂಡಿದ್ದು, ಇದರಿಂದ ಪಂಜಾಬ್ ಸಚಿವ ಕೈ ನಾಯಕ ಸಿಧು ರಾಜಕೀಯ ತೊರೆಯುತ್ತಾರಾ..?

ನವದೆಹಲಿ :  ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ರಾಜೀನಾಮೆಗೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿ ಬಂದಿದೆ.

ಅಮೇಠಿಯಲ್ಲಿ ರಾಹುಲ್ ಗಾಂಧಿ ಸ್ಮೃತಿ ಇರಾನಿ ವಿರುದ್ಧ ಸೋತಲ್ಲಿ ತಾವು ರಾಜಕೀಯವನ್ನೇ ತೊರೆಯುವುದಾಗಿ ಹೇಳಿದ್ದ ಸಿಧು ವಿರುದ್ಧ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದು, ಶೀಘ್ರ ಸ್ಥಾನ ತೊರೆಯುವಂತೆ ಹೇಳಿದ್ದಾರೆ. 

 

ಕಳೆದ ಏಪ್ರಿಲ್ ನಲ್ಲಿ ಉತ್ತರ ಪ್ರದೇಶದಲ್ಲಿ ಸಮಾವೇಶವೊಂದನ್ನು ಉದ್ದೇಶಿಸಿ ಮಾತನಾಡುತ್ತಾ ಸಿಧು ಒಂದು ವೇಳೆ ರಾಹುಲ್ ಸೋತರೆ ತಾವು ರಾಜಕೀಯವನ್ನೇ ತೊರೆಯುವುದಾಗಿ ಹೇಳಿದ್ದರು. 

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೇಠಿಯಲ್ಲಿ ಐತಿಹಾಸಿಕ ಎನ್ನಬಹುದಾದ ಸೋಲು ಕಂಡಿದ್ದಾರೆ. ಇಲ್ಲಿ ಕೇಂದ್ರ ಸಚಿವೆ, ಬಿಜೆಪಿಯ ಸ್ಮತಿ ಇರಾನಿ, ರಾಹುಲ್‌ರನ್ನು 52648   ಮತಗಳಿಂದ ಸೋಲಿಸಿದ್ದಾರೆ. ರಾಹುಲ್‌ಗೆ 400834 ಮತ , ಸ್ಮತಿಗೆ 453482 ಮತ ಪಡೆದಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು