
ಬೆಂಗಳೂರು (ಮಾ.24): ರಾಜ್ಯದಲ್ಲಿ ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಸೇರಿದಂತೆ ಮೈಸೂರು ಭಾಗದಲ್ಲಿ ಮಾ.24, 25ರಂದು ಎರಡು ದಿನಗಳ ಕಾಲ ಪ್ರಚಾರ ರ್ಯಾಲಿ, ಬಹಿರಂಗ ಸಭೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 9ಕ್ಕೆ ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್, ಚಾಮುಂಡೇಶ್ವರಿ ದರ್ಶನ ಪಡೆಯ ಲಿದ್ದಾರೆ. ಬೆಳಗ್ಗೆ 10.15ಕ್ಕೆ ಮಹಾರಾಣಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ತೆರಳಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲದಲ್ಲಿ ರೋಡ್ ಶೋ, ಮಳವಳ್ಳಿಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.