
ನವದೆಹಲಿ(ಮೇ.29): ರಾಹುಲ್ ಗಾಂಧಿ ನಿಫಾ ವೈರಸ್ ಇದ್ದಂಗೆ ಜೊತೆಯಲ್ಲಿದ್ದವರು ಹಾಗೂ ಸಹವಾಸ ಮಾಡಿದವರು ನಾಶವಾಗಿ ಹೋಗುತ್ತಾರೆ ಎಂದು ಹರ್ಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಈಗ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರು ಕೂಡ ನಾಶವಾಗುತ್ತಾರೆ . ಕೇರಳದಲ್ಲಿ ನಿಫಾ ವೈರಸ್'ಗೆ ಈಗಾಗಲೇ 14 ಮಂದಿ ಮೃತಪಟ್ಟಿದ್ದಾರೆ. ಈ ರೋಗಾಣುವನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಹೋಲಿಸಿದ್ದಾರೆ.
ಹರ್ಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲೇ ಹೆಚ್ಚು ಪ್ರಸಿದ್ಧಿ ಪಡೆದವರು. ಕಳೆದ ವರ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಭಾರತ ಕಾಂಗ್ರೆಸ್ ಮುಕ್ತವಾಗಿ ಪ್ರಧಾನಿ ಮೋದಿ ಅವರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದಿದ್ದರು.
ಭಾರತೀಯ ನೋಟುಗಳಲ್ಲಿ ಮಹಾತ್ಮ ಗಾಂಧಿ ಚಿತ್ರದ ಬದಲು ಮೋದಿ ಭಾವಚಿತ್ರವನ್ನು ಸೇರಿಸಬೇಕೆಂದಿದ್ದರು. ಈ ಹೇಳಿಕೆಯಿಂದ ಬಿಜೆಪಿ ಅಂತರವನ್ನು ಕಾಯ್ದುಕೊಂಡಿತ್ತು. ಅನಿಲ್ ಆಗಾಗ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಆದರೆ ಬಿಜೆಪಿ ಯಾವುದೇ ರೀತಿಯ ಕ್ರಮಕ್ಕೆ ಮುಂದಾಗುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.