
ನವದೆಹಲಿ(ಜು.23): ರಾಜ್ಯ ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯ ದುರಾಸೆಗೆ ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕ ಜನತೆ ಸೋತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೈತ್ರಿ ಸರ್ಕಾರ ಉರುಳಿಸುವ ಬಿಜೆಪಿ ಹುನ್ನಾರ ಯಶಸ್ವಿಯಾಗಿದ್ದು ನಿಜವಾದರೂ ಮೈತ್ರಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನತೆ ಸ್ಮರಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇನ್ನು ಕರ್ನಾಟಕದ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, ಎಲ್ಲವನ್ನೂ ಹಣದ ಮೂಲಕ ಖರೀದಿಸುವುದಾಗಿ ಬೀಗುತ್ತಿರುವ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ನಿನ್ನೆ(ಜು.22)ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ, ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ 6 ಮತಗಳ ಅಂತರದಿಂದ ಪರಾಜಯ ಕಂಡ ಪರಿಣಾಮ ಸರ್ಕಾರ ಪತನಗೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.