
ನವದೆಹಲಿ(ನ.2): ಒಂದು ವೇಳೆ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ತನಿಖೆ ನಡೆದಿದ್ದೇ ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್, ನಾನು ಖಚಿತವಾಗಿ ಹೇಳಬಲ್ಲೆ ರಫೆಲ್ ತನಿಖೆ ನಡೆದರೆ ಪ್ರಧಾನಿ ಮೋದಿ ರಾಜಕೀಯ ಭವಿಷ್ಯ ಅಂಧಕಾರದಲ್ಲಿ ಮುಳುಗಲಿದೆ’ಎಂದು ಹೇಳಿದರು.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ರಫೆಲ್ ಯುದ್ಧ ವಿಮಾನ ಖರೀದಿ ದರದ ವಿವರ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ಯುದ್ಧ ವಿಮಾನದ ದರವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ರಿಲಯನ್ಸ್ ಡಿಫೆನ್ಸ್‌ನ ಮುಖ್ಯಸ್ಥ ಅನಿಲ್ ಅಂಬಾನಿ ಜಂಟಿಯಾಗಿ ರಫೇಲ್ ಡೀಲ್ ಕುದುರಿಸಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ನಷ್ಟದಲ್ಲಿದ್ದ ಅಂಬಾನಿ ಕಂಪನಿಗೆ ಡಸಾಲ್ಟ್ ಕಂಪನಿ 284 ಕೋಟಿ ರೂ. ಕೊಟ್ಟಿದ್ದೇಕೆ? ಎಂಬ ಪ್ರಶ್ನೆಯನ್ನು ರಾಹುಲ್ ಮುಂದಿಟ್ಟಿದ್ದಾರೆ. ಇದು ಡಸಾಲ್ಟ್ ಕಂಪನಿಯು ಅಂಬಾನಿ ಕಂಪನಿಗೆ ನೀಡಿದ ಕಿಕ್‌ಬ್ಯಾಕ್ ಹಣ ಎಂದು ರಾಹುಲ್ ಆರೋಪಿಸಿದ್ದಾರೆ.
ಡಸಾಲ್ಟ್ ಏವಿಯೇಷನ್ ಕಂಪನಿಯ ಸಿಇಒ ಓರ್ವ ವ್ಯಕ್ತಿಯನ್ನು ರಕ್ಷಣೆ ಮಾಡುತ್ತಿದ್ದಾರೆ. ಆ ವ್ಯಕ್ತಿ ಒಂದು ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಯಾರ ಹೆಸರನ್ನು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಒಂದು ವೇಳೆ ತನಿಖೆ ಆರಂಭಗೊಂಡಿದ್ದೇ ಆದರೆ ಪ್ರಧಾನಿ ಮೋದಿ ಖಂಡಿತ ಬಚಾವಾಗಲು ಸಾಧ್ಯವಿಲ್ಲ ಎಂದು ರಾಹುಲ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.