ಮೋದಿ-ಅಂಬಾನಿ ಕಳ್ಳರೆಂದು ಸಾಬೀತುಪಡಿಸಿಯೇ ಸಿದ್ದ: ರಾಹುಲ್!

Published : Dec 14, 2018, 08:34 PM IST
ಮೋದಿ-ಅಂಬಾನಿ ಕಳ್ಳರೆಂದು ಸಾಬೀತುಪಡಿಸಿಯೇ ಸಿದ್ದ: ರಾಹುಲ್!

ಸಾರಾಂಶ

ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ(ಡಿ.14): ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಧಾರವನ್ನು ಪ್ರಶ್ನಿಸಿರುವ ರಾಹುಲ್,  ಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಜಿ ವರದಿಯನ್ನು ಉಲ್ಲೇಖಿಸಿದೆ. ಆದರೆ ಸಿಎಜಿ ವರದಿ ವಾಸ್ತವವಾಗಿ ಇಲ್ಲವೇ ಇಲ್ಲ ಎಂದು ಹರಿಹಾಯ್ದರು.

 ಸುಪ್ರೀಂ ಕೋರ್ಟ್ ತೀರ್ಪಿನ ಸಾಲುಗಳನ್ನು ಓದಿದ ರಾಹುಲ್ ಗಾಂಧಿ, ಈ ಕುರಿತ ಸಿಎಜಿ ವರದಿಯನ್ನು ಸಾರ್ವಜನಿಕ ಲೆಕ್ಕ ಸಮಿತಿಯ (ಪಿಎಸಿ)ಯೂ ಪರಿಶೀಲನೆ ನಡೆಸಿದೆ ಎಂಬ ಉಲ್ಲೇಖ ಆಧಾರರಹಿತ ಎಂದು ವಾದಿಸಿದರು. 

ಸಿಎಜಿ ವರದಿ ಎಲ್ಲಿದೆ? ಅದು ಅಸ್ತಿತ್ವದಲ್ಲಿದ್ದರೆ ಅದನ್ನು ತೋರಿಸಿ, ಸಿಎಜಿ ವರದಿ ಎಲ್ಲಿದೆ ಎಂಬುದನ್ನು ಸರ್ಕಾರ ನಮಗೆ ವಿವರಿಸಬೇಕು, ಅದನ್ನು ಪಿಎಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ತೋರಿಸಿ ಎಂದು ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.

ಬಹುಶಃ ಪಿಎಸಿಗೆ ಪರ್ಯಾಯವಾಗಿ ಮತ್ತೊಂದು ಸಂಸ್ಥೆ ಅಸ್ತಿತ್ವದಲ್ಲಿರಬಹುದು, ಅದು ಫ್ರಾನ್ಸ್ ಸಂಸತ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರಬಹುದು ಎಂದು ರಾಹುಲ್ ವ್ಯಂಗ್ಯವಾಡಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಕಳ್ಳ ಎಂದು ಕರೆದಿರುವ ರಾಹುಲ್, ಅನಿಲ್ ಅಂಬಾನಿ ಮತ್ತು ಮೋದಿ ಇದರಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದನ್ನು ಸಬೀತು ಪಡಿಸುತ್ತೇನೆ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!