
ನವದೆಹಲಿ[ಆ.24] ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಭಾರತದಲ್ಲಿ ದ್ವೇಷವನ್ನು ಹರಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯುವಜನಾಂಗಕ್ಕೆ ಉದ್ಯೋಗ ಇಲ್ಲದಂತಾಗಿದ್ದು, ಭವಿಷ್ಯ ಅತಂತ್ರದಿಂದ ಕೂಡಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.
ರಾಹುಲ್ ಗಾಂಧಿ ತಮ್ಮಭಾಷಣದಲ್ಲಿ ಗುರುನಾನಕ್ ಅವರನ್ನು ಎಳೆದು ತಂದಿದ್ದಾರೆ. ಸಂಬಂಧವಿಲ್ಲದ ರೀತಿ ಆರೋಪಗಳನ್ನು ಮಾಡಿದ್ದಾರೆ. 1984 ರ ಸಿಖ್ ದಂಗೆಯಲ್ಲಿ ಅವರದ್ದೆ ಪಕ್ಷದ ಪಾತ್ರವಿದೆ. ಹಾಗಾಗಿ ರಾಹುಲ್ ಗಾಂಧಿ ಕೂಡಲೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.
ರಾಹುಲ್ ಒಬ್ಬಪ್ರಬುದ್ಧ ರಾಜಕಾರಣಿ. ಭಾರತದ ಘನತೆಯನ್ನು ಬೇರೆ ದೇಶದಲ್ಲಿ ಹರಾಜು ಹಾಕುವ ಕೆಲಸ ಮಾಡುತ್ತಿದ್ದಾರೆ. ದೇಶದ ಸಮಗ್ರತೆ ಕೊಂಡಾಡಬೇಕಾದವರೆ ಹೀಗೆ ಮಾಡಬಹುದಾ ಎಂದು ಬಿಜೆಪಿ ವಕ್ತಾರ ಸುಭಾಂಶು ತ್ರಿವೇದಿ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ