
ವಿಜಯಪುರ (ಫೆ.24): ಇಲ್ಲಿನ ತಿಕೋಟದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎಂದಿನಂತೆ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮದು ಮನ್ ಕಿ ಬಾತ್ ಅಲ್ಲ.. ಕಾಮ್ ಕಿ ಬಾತ್. ನಾವು ನುಡಿದಂತೆ ನಡೆದಿದ್ದೇವೆ. ಮೋದಿಜಿಯವರ 2 ಕೋಟಿ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದರು. ಉದ್ಯೋಗ ಸೃಷ್ಟಿ ಮಾಡಿದ್ದಾರಾ? ಬ್ಯಾಂಕ್ ಅಕೌಂಟ್’ಗೆ 15 ಲಕ್ಷ ರೂ ಹಾಕುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಹಾಕಲಿಲ್ಲ. ಇದು ಬಸವಣ್ಣ ಅವರ ನುಡಿದಂತೆ ನಡೆಯುವ ಹಾದಿಯೇ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಸವಣ್ಣ ಎಲ್ಲರೂ ಸಮನರು ಎಂದಿದ್ದರು. ಇಂದು ಬಸವಣ್ಣನವರ ಮಾತೇ ಕಾಂಗ್ರೆಸ್’ಗೆ ಧ್ಯೇಯ ವಾಕ್ಯವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರವಾಗಿ ಕೆಲಸ ಮಾಡಿದೆ. ಮಹಿಳಾ ಸುರಕ್ಷತೆ ವಿಚಾರದಲ್ಲಿ ಕರ್ನಾಟಕ ಸಾಕಷ್ಟು ಮುಂದುವರೆದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾಷಣದ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನನ್ನು ಸ್ಮರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.