
ಬೆಳಗಾವಿ : ಬೆಳಗಾವಿ ಜಿಲ್ಲೆಯ ಗೊಡಚಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದು, ಇಲ್ಲಿ ನಡೆಯುವ ಕಾಂಗ್ರೆಸ್ ಜನಾಶಿರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಈ ವೇಳೆ ರಾಹುಲ್ ಗಾಂಧಿ ಕನ್ನಡದಲ್ಲಿ ಭಾಷಣ ಮಾಡಿದ್ದು, ಮತ್ತೊಮ್ಮೆ ಬಸವಣ್ಣನವರನ್ನು ಸ್ಮರಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದು, ಉದ್ಯೋಗ ಸೃಷ್ಟಿಯಲ್ಲಿಯೂ ಕೂಡ ಅವರು ವಿಫಲರಾಗಿದ್ದಾರೆ.
ಕರ್ನಾಟಕ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ತಮ್ಮ ಪಕ್ಷದ ಭ್ರಷ್ಟಾಚಾರಿಗಳನ್ನೇ ಅಕ್ಕಪಕ್ಕದಲ್ಲೇ ಕೂರಿಸಿಕೊಳ್ಳುತ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಜನೋಪಯೋಗಿ ಕಾರ್ಯ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿಯನ್ನು ದೇಶದ ಜನತೆ ನಾಯಕನಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.