
ನವದೆಹಲಿ (ಡಿ.03): ಎಐಸಿಸಿ ಅಧ್ಯಕ್ಷನಾಗ ಬಯಸಿರುವ ರಾಹುಲ್ಗಾಂಧಿ ಪಕ್ಷದ ಆಂತರಿಕ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಚುನಾವಣಾ ಆಯೋಗದ ಸೂಚನೆಯಂತೆ ಆಂತರಿಕ ಚುನಾವಣೆ ನಡೆಯಲಿದ್ದು, ನಾಳೆ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಲಿದ್ದಾರೆ.
ರಾಹುಲ್ಗಾಂಧಿ ಸಲ್ಲಿಸುವ ನಾಮಪತ್ರಕ್ಕೆ ಸೂಚಕರಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಹಿ ಹಾಕಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲು ಆಗಲೇ ದೆಹಲಿಗೆ ದೌಡಾಯಿಸಿದ್ದಾರೆ. ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿ.ಕೆ. ಜಾಫರ್ ಶರೀಫ್ ಸೇರಿದಂತೆ 18 ಇತರ ಹಿರಿಯ ಕಾಂಗ್ರೆಸ್ ಮುಖಂಡರು ರಾಹುಲ್ ನಾಮಪತ್ರಕ್ಕೆ ಸಹಿ ಹಾಕಿದ್ದಾರೆ.
ಇತ್ತ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸುಪ್ರಿಂ ಕೋರ್ಟ್ ಸೂಚನೆಯನ್ನೂ ಮೀರಿ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ರಾಹುಲ್ಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಾನು ಪಪ್ಪುಗಳ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಅಂತಾ ಲೇವಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.