ರಾಜ್ಯದ ಎಲ್ಲಾ ಧರ್ಮದ ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ರಾಹುಲ್

Published : Dec 18, 2017, 12:00 PM ISTUpdated : Apr 11, 2018, 12:48 PM IST
ರಾಜ್ಯದ ಎಲ್ಲಾ ಧರ್ಮದ ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ರಾಹುಲ್

ಸಾರಾಂಶ

ಗುಜರಾತ್ ವಿಧಾನಸಭೆ ಪ್ರಚಾರದ ವೇಳೆ ಒಂದಿಲ್ಲೊಂದು ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ ವಿಧಾನ ಸಭೆ ಚುನಾವಣೆ ವೇಳೆ ರಾಜ್ಯದ ಎಲ್ಲ ಧರ್ಮಗಳ ಪೂಜಾ ಸ್ಥಳಗಳಿಗೆ ಭೇಟಿ ನೀಡುತ್ತಾರಂತೆ.

ನವದೆಹಲಿ(ಡಿ.18):  ಗುಜರಾತ್ ವಿಧಾನಸಭೆ ಪ್ರಚಾರದ ವೇಳೆ ಒಂದಿಲ್ಲೊಂದು ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ ವಿಧಾನ ಸಭೆ ಚುನಾವಣೆ ವೇಳೆ ರಾಜ್ಯದ ಎಲ್ಲ ಧರ್ಮಗಳ ಪೂಜಾ ಸ್ಥಳಗಳಿಗೆ ಭೇಟಿ ನೀಡುತ್ತಾರಂತೆ.

ಖುದ್ದು ಕಾಂಗ್ರೆಸ್ ಮುಖಂಡರು ಈ ರೀತಿ ಹೇಳಿಕೆ ನೀಡಿದ್ದಾರೆ. ಇಂಗ್ಲಿಷ್ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಕರ್ನಾಟಕದ ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, `ರಾಹುಲ್ ಗುಜರಾತ್’ನಲ್ಲಿ ಹಿಂದುಗಳನ್ನು ಓಲೈಸಲು ಭೇಟಿ ನೀಡಿದ್ದರು ಎಂದು ಆರೆಸ್ಸೆಸ್ ಅಪಪ್ರಚಾರ ಮಾಡಿತು. ಮಂದಿರಗಳಲ್ಲಿ ನಂಬಿಕೆ ಇದ್ದವರನ್ನು ಗೌರವಿಸುವ ಕಾರಣದಿಂದ ರಾಹುಲ್ ಅವರು ಅಲ್ಲಿಗೆ ಭೇಟಿ ನೀಡಿದರು.

ಕರ್ನಾಟಕದಲ್ಲಿ ಅವರು ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ಎಲ್ಲ ಧರ್ಮಗಳ ಪೂಜಾ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಏಕೆಂದರೆ ರಾಹುಲ್ ಎಲ್ಲ ಧರ್ಮಗಳನ್ನು ಗೌರವಿಸುತ್ತಾರೆ. ಕಾಂಗ್ರೆಸ್ ಪಕ್ಷದ ಜಾತ್ಯತೀತ ನಿಲವು ಅಚಲವಾಗಿದೆ' ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!