
ಬೆಳಗಾವಿ [ಜು.05] : ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿಡಿದ್ದರೂ ಅವರೇ ನಮ್ಮ ನಾಯಕರು ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಖಾದರ್, ರಾಜೀನಾಮೆ ಬಗ್ಗೆ ರಾಹುಲ್ ಗಾಂಧಿ ದೃಢವಾದ ನಿರ್ಧಾರ ತೆಗೆದು ಕೊಂಡಿರುವುದು ನಮಗೆ ದುಃಖದ ಸಂಗತಿ. ಅವರು ರಾಜೀನಾಮೆ ನೀಡಿದರೂ ಪಕ್ಷ ಸಂಘಟನೆಯಲ್ಲಿ ಓರ್ವ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು.
ಇನ್ನು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗದು. ಇನ್ನೂ ನಾಲ್ಕು ವರ್ಷ ಸುಭದ್ರವಾಗಿರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಕೈ ಅತೃಪ್ತ ಶಾಸಕ ಎಂದೇ ಗುರುತಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದಕ್ಕೂ ಒಂದು ಪದ್ಧತಿ ಇದೆ. ಅದೇ ರೀತಿಯಲ್ಲಿಯೇ ನಡೆಯಬೇಕು. ಆದರೆ ಗವರ್ನರ್ ಬಳಿಕ ತನ್ನ ರಾಜೀನಾಮೆ ನೀಡಿದ್ದಾರೆ. ಹೀಗೆ ಮಾಡುವ ಮೂಲಕ ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೇನೋ ? ಜಾರಕಿಹೊಳಿ ಮೂಲತಃ ಕಾಂಗ್ರೆಸ್, ಆದರೆ ಅವರನ್ನು ಇಲ್ಲಿಯವರೆಗೂ ಯಾವ ಕಾಂಗ್ರೆಸ್ ನಾಯಕರೂ ಕೂಡ ಸಂಪರ್ಕ ಮಾಡಿಲ್ಲ ಎಂದು ಖಾದರ್ ಹೇಳಿದರು.
ಶೋಭಾ ಕರಂದ್ಲಾಜೆ ವಿರುದ್ಧ ವಾಗ್ದಾಳಿ : ಇನ್ನು ಶೋಭಾ ಕರಂದ್ಲಾಜೆ ಮಂಗಳೂರು ಅಭಿವೃದ್ಧಿಗೆ ಪೂರಕವಾದ ಸಲಹೆ ನೀಡಿದಲ್ಲಿ ಸ್ವಾಗತ. ಆದರೆ ಯಾವುದೋ ಪ್ರಕರಣ ಇಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ಆರೋಪ ಮಾಡುವ ಅವರು ಗೊಂದಲದ ಹೇಳಿಕೆ ನೀಡುತ್ತಾರೆ. ಉಡುಪಿ ಜನ ಶೋಭಾ ನೋಡಿ ಮತ ನೀಡಿಲ್ಲ.ಮೋದಿ ನೋಡಿ ವೋಟ್ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.