
ನವದೆಹಲಿ: ಈಶಾನ್ಯದ ಮೂರು ರಾಜ್ಯಗಳಲ್ಲಿ ಸೋಲು ಅನುಭವಿಸಿದ ಎರಡು ದಿನಗಳ ಬಳಿಕ ಮೌನ ಮುರಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರದೇಶದ ಜನರ ತೀರ್ಪನ್ನು ಗೌರವಿಸುತ್ತೇನೆ ಮತ್ತು ಅವರ ವಿಶ್ವಾಸ ಮರಳಿ ಗಳಿಸಲು ಬದ್ಧನಾಗಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.
ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಎರಡು ದಿನಗಳ ಬಳಿಕ ರಾಹುಲ್ ಹೇಳಿಕೆ ಹೊರಬಿದ್ದಿದೆ. ಮೇಘಾಲಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದರೆ, ತ್ರಿಪುರ, ನಾಗಾಲ್ಯಾಂಡ್‌ನಲ್ಲಿ ಶೂನ್ಯ ಸಾಧನೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.