
ತಿರುವನಂತಪುರಂ: ಪಶು ಮಾರುಕಟ್ಟೆಯಲ್ಲಿ ಹತ್ಯೆಯ ಉದ್ದೇಶಕ್ಕಾಗಿ ಪ್ರಾಣಿಗಳ ಮಾರಾಟ ನಿಷೇಧಿಸಿರುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಕೇರಳದ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, 18 ತಿಂಗಳ ಎಮ್ಮೆ ಕರುವೊಂದನ್ನು ಸಾರ್ವಜನಿಕವಾಗಿಯೇ ಹತ್ಯೆ ಮಾಡಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ 16 ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಖುದ್ದು ಈ ಘಟನೆ ಖಂಡಿಸಿ, ‘ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್ ಸಹಿಸುವುದಿಲ್ಲ' ಎಂದಿದ್ದಾರೆ.
ಈ ನಡುವೆ, ಕೇರಳ ಸರ್ಕಾರವು ಕೇಂದ್ರದ ನಿಯಮಗಳಿಗೆ ಸಡ್ಡು ಹೊಡೆಯಲು ತನ್ನದೇ ಆದ ಪ್ರತ್ಯೇಕ ಕಾಯ್ದೆ ತರುವ ಸುಳಿವು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.