2017ರ ಕೊನೆಯಲ್ಲಿ ಕಾಂಗ್ರೆಸ್’ಗೆ ರಾಹುಲ್ ಗಾಂಧಿ ಸಾರಥ್ಯ?

Published : Aug 08, 2017, 06:56 PM ISTUpdated : Apr 11, 2018, 12:39 PM IST
2017ರ ಕೊನೆಯಲ್ಲಿ ಕಾಂಗ್ರೆಸ್’ಗೆ ರಾಹುಲ್ ಗಾಂಧಿ ಸಾರಥ್ಯ?

ಸಾರಾಂಶ

2018ರಲ್ಲಿ ಕೆಲವು ರಾಜ್ಯಗಳಿಗೆ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ  ಚುಕ್ಕಾಣಿ ವಹಿಸಲಿದ್ದಾರೆ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ. ಬಹುತೇಕವಾಗಿ ಈ ವರ್ಷದ ಕೊನೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿ: 2018ರಲ್ಲಿ ಕೆಲವು ರಾಜ್ಯಗಳಿಗೆ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ  ಚುಕ್ಕಾಣಿ ವಹಿಸಲಿದ್ದಾರೆ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ.

ಬಹುತೇಕವಾಗಿ ಈ ವರ್ಷದ ಕೊನೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆಯೂ ತಾನು ಈ ಕುರಿತು ಹೇಳಿಕೆ ನೀಡಿದ್ದು, ಅವು ತಪ್ಪು ಸಾಬೀತಾಗಿವೆ. ಆದರೆ ಈ ಬಾರಿ ಅದು ಸತ್ಯವಾಗಬಹುದು ಎಂದು ಅವರು ಹೇಳಿದ್ದಾರೆ.

2015ರಲ್ಲಿ ಈ ರೀತಿಯಾಗಬಹುದೆಂದು ನಿರೀಕ್ಷಿಸಿದ್ದೆ, ಆದರೆ ಆಗಲಿಲ್ಲ. 2016ರಲ್ಲೂ ಅದೇ ರೀತಿ ಆಯಿತು. ಆದರೆ 2017ರಲ್ಲಿ ಅದು ಆಗಿಯೇ ತಿರುವುದು ಎಂದು ನನಗನಿಸುತ್ತಿದೆ ಎಂದು ಜೈರಾಮ್ ರಮೇಶ್ ನುಡಿದಿದ್ದಾರೆ.

ಮುಂಬರುವ ವರ್ಷ ವಿಧಾನಸಭೆಗಳಿಗೆ ಚುನಾವಣೆಗಳು ನಡೆಯಲಿವೆ. ಅದರ ಮುಂದಿನ ವರ್ಷ ಲೋಕಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಅನಿಶ್ಚಿತತೆ ಒಳ್ಳಯದಲ್ಲ ಎಂದು ಅವರು ತಮ್ಮ ನಿರೀಕ್ಷೆಯನ್ನು ಸಮರ್ಥಿಸಿಕೊಂಡಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸರಣಿ ಸಾವು, ಸಾರ್ವಜನಿಕರಿಗೆ ಪ್ರವೇಶ ನಿಷೇಧ, ವೈದ್ಯರ ತೀವ್ರ ನಿಗಾ
ಬೆಂಗಳೂರಿಗೆ ಟಕ್ಕರ್ ಕೊಡೋಕೆ ಹೋಗಿ ಕೇಂದ್ರದಿಂದ ಮತ್ತೆ ಛೀಮಾರಿ ಹಾಕಿಸಿಕೊಂಡ ತಮಿಳುನಾಡು