
ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಗುರುವಾರ ತುಂತುರು ಹಾಗೂ ಹಗುರ ಮಳೆಯಾಗಿದೆ. ಒಂದೆರಡು ಕಡೆ ಆಲಿಕಲ್ಲು ಸಹಿತ ಮಳೆ ಬಿದ್ದಿದೆ.
ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಆಲಿಕಲ್ಲು ಸಹಿತ ಮಳೆ ಬಿದ್ದಿದ್ದು, 10 ಮಿ. ಮೀ. ಮಳೆ ದಾಖಲಾಗಿದೆ. ಎಚ್‌ಎಸ್‌ಆರ್ ಲೇಔಟ್, ಕೋರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲವು ನಿಮಿಷಗಳ ಕಾಲ ಉತ್ತಮ ಮಳೆ ಸುರಿದಿದೆ. ಉಳಿದಂತೆ ಬಸವನಗುಡಿಯಲ್ಲಿ 6 ಮಿ.ಮೀ, ಸಾರಕ್ಕಿ 3,ಕೋಣನಕುಂಟೆ 2.5, ಬಂಡಿಕೊಡಿಗೇಹಳ್ಳಿ 3, ಹೆಮ್ಮಿಗೆಪುರ 3, ರಾಜಾನುಕುಂಟೆ 1.5, ಉತ್ತರಹಳ್ಳಿ, ಲಾಲ್‌ಬಾಗ್ ಮತ್ತಿತರ ಕಡೆ ತಲಾ 1 ಮಿ.ಮೀ. ಮಳೆ ದಾಖಲಾಗಿದೆ.
ಅಲ್ಲದೆ, ಟೌನ್‌ಹಾಲ್, ಮುತ್ಸಂದ್ರ, ದೊಮ್ಮಸಂದ್ರ ಸೇರಿದಂತೆ ಹಲವೆಡೆ ತುಂತುರು ಮಳೆ ಬಿದ್ದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ. ಇನ್ನೂ ಎರಡು ದಿನ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.