ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

By Web DeskFirst Published Apr 22, 2019, 11:24 AM IST
Highlights

ಬಿಸಿನ ಬೇಗೆಯಿಂದ ತತ್ತರಿಸಿದ ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

ಬೆಂಗಳೂರು :  ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಕ್ಕೆ ಸೀಮಿತವಾಗಿದ್ದ ಮಳೆ ಸೋಮವಾರದಿಂದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ವ್ಯಾಪಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗಾಳಿಯ ಒತ್ತಡ ಕಡಿಮೆ ಇರುವುದರಿಂದ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಕ್ಕೆ ಸೀಮಿತವಾಗಿದ್ದ ಮಳೆ ಸೋಮವಾರ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೆಲ ಭಾಗದಲ್ಲಿ ಸಾಧಾರಣವಾಗಿ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವಗೌಡ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಇನ್ನು ನಾಲ್ಕರಿಂದ ಐದು ದಿನ, ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಕೆಲವೆಡೆ ಸಾಧಾರಣ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ತಿಳಿಸಿದ್ದಾರೆ. 

ಭಾನುವಾರ ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಬೀದರ್‌, ಬೆಳಗಾವಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾದ ವರದಿಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

click me!