
ಚೆನ್ನೈ: ದೇಶದಲ್ಲಿ ರಾಜ್ಯ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕೆಂಬ ವಿಚಾರಕ್ಕೆ ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪ್ರವೇಶಕ್ಕೆ ತುದಿಗಾಲಲ್ಲಿ ನಿಂತಿರುವ ರಜನೀಕಾಂತ್ ಅವರು ಭಾನುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಜನೀಕಾಂತ್, ‘ದೇಶದಲ್ಲಿ ಒಮ್ಮೆಗೇ ಚುನಾವಣೆಗಳು ನಡೆಯುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ,’ ಎಂದು ಪ್ರತಿಪಾದಿಸಿದರು.
ಅಲ್ಲದೆ, ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ವೆಚ್ಚದ ಗ್ರೀನ್‌ಫೈಲ್ಡ್ ಚೆನ್ನೈ-ಸೇಲಂ ಅಷ್ಟಪಥದ ಹೆದ್ದಾರಿ ನಿರ್ಮಾಣ ವಾಗಬೇಕು ಎಂದು ಅವರು ಇದೇ ವೇಳೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.